ಮೂಡುಬಿದಿರೆ: ಬಸ್- ಲಾರಿ ಮಧ್ಯೆ ಅಪಘಾತ, ಹಲವರಿಗೆ ಗಾಯ

0
530

ಮೂಡುಬಿದಿರೆ, ಜು 23: ಮೂಡಬಿದಿರೆ ಸಮೀಪದ ತೋಡಾರ್ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ದ್ದು, ಬಸ್ ನಲ್ಲಿದ್ದ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ.

ಮೂಡಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬಸ್ ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ ಬಳಿ ಅಪಘಾತ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೊರತರಲು ಸ್ಥಳೀಯರು ಹರಸಾಹಸ ಪಡಬೇಕಾಯಿತು ಎಂದು ವರದಿಯಾಗಿದೆ.

ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.