ಸನ್ಮಾರ್ಗ ವಾರ್ತೆ
ಮಂಗಳೂರು, ಅ.5: ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವಂತೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಅಕ್ಟೋಬರ್ 7ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
“ವೋಟ್ ಚೋರಿ ವಿರುದ್ಧ ಬೃಹತ್ ಪ್ರತಿಭಟನೆ” ಎಂಬ ಘೋಷಣೆಯೊಂದಿಗೆ ನಡೆಯಲಿರುವ ಪ್ರತಿಭಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿವಸುಂದರ್ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕಗಳು ಹಾಗೂ ಮತದಾರರ ಹಕ್ಕುಗಳಿಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ಮುಂದಿಟ್ಟು ಧ್ವನಿ ಎತ್ತಲಾಗುವುದು.
ಪ್ರತಿಭಟನೆಯಲ್ಲಿ ಬೆಂಗಳೂರು ಮೂಲದ ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಶಿವಸುಂದರ್ ಅವರು ಪ್ರಮುಖವಾಗಿ ಮಾತನಾಡಲಿದ್ದಾರೆ.
“ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗೆ” ಎಂಬ ಆಶಯದೊಂದಿಗೆ ನಡೆಯುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕರೆ ನೀಡಿದೆ.
ಪ್ರತಿಭಟನೆಯು ಅಕ್ಟೋಬರ್ 7, 2026ರಂದು ಸಂಜೆ 4.30ಕ್ಕೆ ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಡ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮನವಿ ಮಾಡಿದೆ












