ಜಂತರ್ ಮಂತರ್ ಪ್ರತಿಭಟನಾ ಸ್ಥಳ ತೆರವುಗೊಳಿಸಿರುವ ವಿರುದ್ಧದ ವಿರೋಧ ಪಕ್ಷಗಳ ಅರ್ಜಿಯ ಕುರಿತು ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್

0
226

ಸನ್ಮಾರ್ಗ ವಾರ್ತೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ನಾಯಕರು ಸಲ್ಲಿಸಿದ ಅರ್ಜಿಯ ಮೇರೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆಗಳನ್ನು ಕೋರಲಾಗಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಪ್ರತ್ಯೇಕ ವಿಷಯವೊಂದರಲ್ಲಿ, ಜಂತರ್ ಮಂತರ್ ಅನ್ನು ನಿರ್ದಿಷ್ಟ ಪ್ರತಿಭಟನಾ ಸ್ಥಳವಾಗಿ ಅಧಿಸೂಚನೆ ರದ್ದುಗೊಳಿಸಿರುವುದನ್ನು (ಡಿ-ನೊಟಿಫಿಕೇಷನ್) ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ಮೇರೆಗೆ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಂದ ನ್ಯಾಯಾಲಯವು ಪ್ರತಿಕ್ರಿಯೆಗಳನ್ನು ಕೋರಿದೆ.

ವಿಚಾರಣೆಯ ಸಂದರ್ಭದಲ್ಲಿ, ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ವಕೀಲರಾದ ಮುಕ್ತಾ ಗುಪ್ತಾ ಅವರು, ಪ್ರತಿಭಟನಾ ಸ್ಥಳವೆಂದರೆ ಪ್ರತಿಭಟನಾಕಾರರ ಧ್ವನಿಯು “ಅಧಿಕಾರದಲ್ಲಿರುವವರಿಗೆ ಕೇಳಿಸುವಂತಿರಬೇಕು” ಎಂದು ವಾದಿಸಿದರು.

“‘ಕೇಳಿಸುವುದು’ ಎಂಬ ಪದವನ್ನು ತಂತ್ರಜ್ಞಾನದ ದೃಷ್ಟಿಕೋನದಿಂದಲೂ ಅರ್ಥಮಾಡಿಕೊಳ್ಳಬೇಕು” ಎಂದು ನ್ಯಾಯಮೂರ್ತಿ ಜೋಯ್‌ಮಾಲ್ಯ ಬಾಗ್ಚಿ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ವಿರುದ್ಧ ಸುಪ್ರೀಂ ಕೋರ್ಟ್ ಕಡೆಗೆ ನಡೆಸಿದ ಮೆರವಣಿಗೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ಮೇರೆಗೆ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಇತರರಿಗೂ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.