ಬೆಂಗಳೂರು, ಜು.29: ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪರವರು ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಇದೇ ವೇಳೆ ಹದಿನೇಳು ಮಂದಿ ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಸದನದಲ್ಲಿ ವಿಶ್ವಾಸ ಮತಗೆಲ್ಲುವುದು ಬಹಳ ಸುಲಭವಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಬಿಜೆಪಿ ಸರಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ ಎಂದು ಎಚ್ಡಿ ದೇವಗೌಡ ಹೇಳಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸ್ಪೀಕರ್ ಅನರ್ಹ ಗೊಳಿಸಿದ ಜೆಡಿಎಸ್-ಕಾಂಗ್ರೆಸ್ ಅತೃಪ್ತರು ಸುಪ್ರೀಂಕೋರ್ಟಿನ ಮೊರೆ ಹೋಗಲು ನಿರ್ಧರಿಸಿದ್ದು ಸುಪ್ರೀಂಕೋರ್ಟಿನ ತೀರ್ಪು ಅವರ ಭವಿಷ್ಯವನ್ನು ನಿರ್ಧಾರ ಮಾಡಲಿದೆ. ಅನರ್ಹ ಶಾಸಕರ ಪರ ಮುಕುಲ್ ರೋಹ್ಟಗಿ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಲಿದ್ದಾರೆ.












