ಸನ್ಮಾರ್ಗ ವಾರ್ತೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹೆಸರನ್ನು ಬದಲಾಯಿಸಲು ಯೋಜಿಸುತ್ತಿದ್ದಾರೆ. ಡಿಸೆಂಬರ್ 4 ರಂದು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಹೆಸರು ಬದಲಾಯಿಸುವ ನಿರ್ಣಯವನ್ನು ಅವರು ಮಂಡಿಸಲಿದ್ದಾರೆ. ‘ವೆಸ್ಟ್ ಬೆಂಗಾಲ್’ (West Bengal) ನಿಂದ ‘ಪಶ್ಚಿಮ ಬಂಗಾ’ ಗೆ ಬದಲಾಯಿಸುವ ಪ್ರಸ್ತಾವನೆ ಇದಾಗಿದೆ. ಡಿಸೆಂಬರ್ 9 ರಂದು ವಿಧಾನಸಭೆಯಲ್ಲಿ ಈ ನಿರ್ಣಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸುವೇಂದು ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೆಸರು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಧಾನಸಭೆಯಲ್ಲಿ ಈ ನಿರ್ಣಯ ಅಂಗೀಕಾರವಾದರೆ, ಅಂತಿಮ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಪಶ್ಚಿಮ ಬಂಗಾಳ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 14 ರವರೆಗೆ ನಡೆಯಲಿದೆ. ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಪಶ್ಚಿಮ ಬಂಗಾಳದ ಅಧಿಕೃತ ಹೆಸರು ‘ಪಶ್ಚಿಮ ಬಂಗ’ (Paschim Banga) ಎಂದು ಬದಲಾಗಲಿದೆ.












