ಸನ್ಮಾರ್ಗ ವಾರ್ತೆ
ಸೌದಿ ಅರೇಬಿಯಾದ ಜಿಝಾನ್ ತೈಲ ಸಂಸ್ಕರಣಾ ಘಟಕದ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ನೇಪಾಳಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಈ ಸಂಸ್ಕರಣಾ ಘಟಕವು ನೈರುತ್ಯ ಸೌದಿ ಅರೇಬಿಯಾದ ಕೆಂಪು ಸಮುದ್ರದ ಕರಾವಳಿಯಲ್ಲಿದೆ ಮತ್ತು ದಿನಕ್ಕೆ 4 ಲಕ್ಷ ಬ್ಯಾರೆಲ್ ಗಳಷ್ಟು ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ.
ದಾಳಿಯಲ್ಲಿ ಗಾಯಗೊಂಡ ಕಾರ್ಮಿಕರು ವಿವಿಧ ರಾಷ್ಟ್ರದವರಾಗಿದ್ದು ಅವರಿಗೆ ಅಗತ್ಯ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಇದಕ್ಕಿಂತ ಎರಡು ದಿನಗಳ ಮೊದಲು ರಿಯಾದ್ ನ ಕಿಂಗ್ ಅಬ್ದುಲ್ಲ ಹಣಕಾಸು ಸಂಸ್ಥೆ ಇರುವ ಗೋಪುರದ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯಲ್ಲಿ 11 ಮಂದಿ ಗಾಯಗೊಂಡಿದ್ದರು. ಸೌದಿ ವಿಮಾನ ನಿಲ್ದಾಣಗಳು ತೈಲ ಸೌಲಭ್ಯಗಳು ಮತ್ತು ಇತರ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಹೌತಿ ಬಂಡುಕೋರರು ಪದೇ ಪದೇ ದಾಳಿ ನಡೆಸುತ್ತಿದ್ದಾರೆ.












