ಸನ್ಮಾರ್ಗ ವಾರ್ತೆ
ಹಿಂಗೋಲಿ: ದೆಹಲಿಯಲ್ಲಿ ಪೊಲೀಸ್ ವಶದಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರ ಅಜ್ಜಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್ ಪಿಂಪ್ರಿ ಗ್ರಾಮದಲ್ಲಿ ವಾಸಿಸುತ್ತಿದ್ದ ಅವರ ಅಜ್ಜಿ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ಅಭಿಜಿತ್ ದಿಪ್ಕೆ ಮುಂಬೈನಿಂದ ದೆಹಲಿಗೆ ಬಂದಿದ್ದರು. ವಿಮಾನವು ಬಂದಿಳಿದ ನಂತರ, ದೆಹಲಿ ಪೊಲೀಸರು ವಿಮಾನದೊಳಗೆ ಪ್ರವೇಶಿಸಿ ಅವರನ್ನು ವಶಕ್ಕೆ ತೆಗೆದುಕೊಂಡರು.
ಅಭಿಜಿತ್ ದಿಪ್ಕೆ ಅವರ ಪೋಷಕರಾದ ಅನಿತಾ ಮತ್ತು ಭಗವಾನ್ ದಿಪ್ಕೆ ಪ್ರಸ್ತುತ ಛತ್ರಪತಿ ಸಂಭಾಜಿನಗರದಲ್ಲಿದ್ದಾರೆ. ಪೊಲೀಸರು ಅವರ ಮನೆಯ ಹೊರಗೆ ಕಾವಲು ಕಾಯಿಸಿದ್ದಾರೆ. ಮಾಹಿತಿ ಪಡೆದ ನಂತರ, ಇಬ್ಬರೂ ಹಿಂಗೋಲಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ ಘೋಷಿಸಿತ್ತು. ಪ್ರತಿಭಟನೆಯನ್ನು ತಡೆಯುವ ಪ್ರಯತ್ನಗಳ ಭಾಗವಾಗಿ ಅಭಿಜಿತ್ ದಿಪ್ಕೆ ಅವರೊಂದಿಗೆ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು.












