ಸುಳ್ಯದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ್ಯು

0
1318

ಸನ್ಮಾರ್ಗ ವಾರ್ತೆ-

ಸುಳ್ಯ; ಅ.1- ಮಂಗಳೂರು- ಮಡಿಕೇರಿ ರಸ್ತೆಯ ಜಾಲಸೂರು ಗ್ರಾಮದ ಅಡ್ಯಾರು ಬಳಿ ಕಾರು ಹಾಗು ಲಾರಿ ನಡುವೆ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಇನ್ನೋರ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸನ್ಮಾರ್ಗ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಹೆದ್ದಾರಿಯ ಜಾಲಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಸ್ವಿಫ್ಟ್ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ಒಂದೇ ಕುಟುಂಬಕ್ಕೆ ಸೇರಿದ ಹಸೈನಾರ್ ಹಾಜಿ(80), ಇಬ್ರಾಹೀಮ್(55), ಅಬ್ದುಲ್ ರಹ್ಮಾನ್( 50) ಮತ್ತು ಹಾರಿಸ್(45) ಮೃತಪಟ್ಟಿದ್ದಾರೆ. ಉಮ್ಮರ್ ಫಾರೂಕ್ ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.