ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಕಚೇರಿಗೆ ನಟ ಪ್ರಕಾಶ್ ರಾಜ್ ಭೇಟಿ

0
238

ಸನ್ಮಾರ್ಗ ವಾರ್ತೆ

ಬೆಂಗಳೂರು: ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಅವರು ಇಂದು ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕದ ರಾಜ್ಯ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳು, ವಿಶೇಷವಾಗಿ ವಿಶೇಷ ತೀವ್ರ ಪರಿಷ್ಕರಣೆ (SIR) ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಸಮಾಜದ ಹಿತಾಸಕ್ತಿ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಯ ಹಿನ್ನೆಲೆಯಲ್ಲಿ ನಾಗರಿಕ ಸಮಾಜದ ಸಂಘಟನೆಗಳ ನಡುವೆ ಇರಬೇಕಾದ ಪರಸ್ಪರ ಸಹಕಾರ, ಸಮನ್ವಯ ಮತ್ತು ಸಂವಾದದ ಅಗತ್ಯತೆ ಕುರಿತು ಕೂಡ ಚರ್ಚಿಸಲಾಯಿತು. ವಿವಿಧ ಸಾಮಾಜಿಕ ಸಂಘಟನೆಗಳು ಸಮಾನ ಮನಸ್ಕತೆಯಿಂದ ಒಗ್ಗೂಡಿ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ಸೌಹಾರ್ದ, ನ್ಯಾಯ ಮತ್ತು ಸಹಬಾಳ್ವೆಯನ್ನು ಬಲಪಡಿಸಬೇಕಾದ ಅಗತ್ಯವನ್ನು ಈ ಸಂದರ್ಭದಲ್ಲಿ ಒತ್ತಿಹೇಳಲಾಯಿತು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಜನಾಬ್ ಸಾದ್ ಬೆಳ್ಗಾಮಿ ಹಾಗೂ ರಾಜ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.