ಸನ್ಮಾರ್ಗ ವಾರ್ತೆ
ಕಾಬೂಲ್: ಆಗಸ್ಟ್ ತಿಂಗಳಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡ ಬಳಿಕ ಮೊದಲ ಬಾರಿಗೆ ಅಫ್ಘಾನಿಸ್ತಾನದ ವಿಶ್ವವಿದ್ಯಾನಿಲಯಗಳು ಕಲಿಕೆಗೆ ತೆರೆದುಕೊಂಡಿವೆ. ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕೊಠಡಿ ಇರಲಿದ್ದು ಅಧ್ಯಯನಕ್ಕೆ ಯಾವುದೇ ಅಡ್ಡಿಯಿಲ್ಲ. ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳು ಜೊತೆಗಿದ್ದು ಕಲಿಯಲು ಅವಕಾಶ ನೀಡಲಾಗುವುದಿಲ್ಲ ಎಂದು ತಾಲಿಬಾನ್ ಹೇಳಿಕೊಂಡಿತ್ತು. ಪೂರ್ವ ನಗರ ಜಲಾಲಬಾದಿನ ನಂಗರ್ಹರ್ ಯುನಿವರ್ಸಿಟಿಯಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಪ್ರವೇಶ ದ್ವಾರ ನಿರ್ಮಿಸಲಾಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಹಿಂದಿನ ತಾಲಿಬಾನ್ ಸರಕಾರದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿಷೇಧಿಸಲಾಗಿತ್ತು. ದೇಶದ ಖಾಸಗಿ ವಿಶ್ವವಿದ್ಯಾನಿಲಯಗಳು ತೆರೆಯಲಾಗಿದ್ದರೂ ಬಹಳಷ್ಟು ಹೆಣ್ಣುಮಕ್ಕಳಿಗೆ ಕಲಿಕೆಯನ್ನು ಮುಂದುವರಿಸಲು ಆಗಿರಲಿಲ್ಲ.












