ವಯೋ ಸಹಜ ಅನಾರೋಗ್ಯ; ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

0
179

ಸನ್ಮಾರ್ಗ ವಾರ್ತೆ

ನವದೆಹಲಿ, ಜೂನ್ 27: ಮಾಜಿ ಉಪ ಪ್ರಧಾನಿ, ಭಾರತ ರತ್ನ ಎಲ್‌ಕೆ ಅಡ್ವಾಣಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್​​ಗೆ ಬುಧವಾರ ರಾತ್ರಿ ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಪ್ರಕಟಣೆ ಹೊರಡಿಸಿದೆ.

ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಮತ್ತು ಸದ್ಯ ಅಬ್ಸರ್ವೇಷನ್​ನಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 96 ವರ್ಷ ವಯಸ್ಸಿನ ಅಡ್ವಾಣಿ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅವರ ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆಯು ಹೆಚ್ಚಿನ ವಿವರ ನೀಡಿಲ್ಲ.