ಕಾಂಗ್ರೆಸ್ ಅಧ್ಯಕ್ಷತೆಗೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ

0
117

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದ ಹಿರಿಯ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದಾರೆ ಎಂಬ ಸೂಚನೆ ಲಭಿಸಿದೆ. ಇದರೊಂದಿಗೆ ತ್ರಿಕೋನ ಸ್ಪರ್ಧೆ ಏರ್ಪಡುವುದು ಬಹುತೇಕ ಖಚಿತವಾದಂತಾಗಿದೆ. ಈಗಾಗಲೇ ಶಶಿ ತರೂರ್, ದಿಗ್ವಿಜಯ್ ಸಿಂಗ್‌ರವರು  ಸ್ಪರ್ಧಾ ಕಣದಲ್ಲಿದ್ದಾರೆ. ಮೂರನೇ ವ್ಯಕ್ತಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದು ಇನ್ನಷ್ಟು ಕುತೂಹಲ ಕೆರಳಿಸಿದೆ.

ಮೂಲಗಳು ತಿಳಿಸಿದಂತೆ ಖರ್ಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಕೂಡ ಇಂದು ನಾಮಪತ್ರ ಸಲ್ಲಿಸುವರು ಎಂಬುದಾಗಿ ವರದಿಯಾಗಿದೆ. ತರೂರ್ ಕೇರಳದವರಾದರೆ, ದಿಗ್ವಿಜಯ್ ಸಿಂಗ್ ಮಧ್ಯಪ್ರದೇಶದವರು. ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ಈ ಸಲ ಗಾಂಧಿ ಕುಟುಂಬವು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ.