ದ‌.ಕನ್ನಡ ಜಿಲ್ಲೆಯಲ್ಲಿ ಕೊರೋನಕ್ಕೆ ಮಹಿಳೆ ಬಲಿ: ಮೃತರ ಸಂಖ್ಯೆ 10ಕ್ಕೆ ಏರಿಕೆ

0
697

ಸನ್ಮಾರ್ಗ ವಾರ್ತೆ

ಮಂಗಳೂರು.ಜೂ‌.24: ತೊಕ್ಕೊಟಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಕೊರೋನ ದೃಢಪಟ್ಟಿದ್ದು, ಬುಧವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ‌.

ಉಳ್ಳಾಲದ ನಿವಾಸಿಯಾದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಮಹಿಳೆ ಚಿಕಿತ್ಸೆ ಪಡೆದಿದ್ದು, ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೊರೋನ ಇರುವುದು ವರದಿಯಲ್ಲಿ ದೃಢವಾಗಿದ್ದು, ತದನಂತರ ಅವರನ್ನು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಸದಸ್ಯರು ಸೇರಿದಂತೆ ಒಟ್ಟು 19 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳಿಂದಲೂ ಗಂಟಲು ದ್ರವ ಪರೀಕ್ಷೆಗೆ ಮಾದರಿಯನ್ನು ಸಂಗ್ರಹಿಸಲಾಗಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ