ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‍ಡೌನ್ ಸಾಧ್ಯತೆ: ಸಾಮ್ನಾ ವರದಿ

0
418

ಸನ್ಮಾರ್ಗ ವಾರ್ತೆ

ಮುಂಬೈ: ಕೊರೋನ ಪ್ರಕರಣಗಳಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿರು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುನಃ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ ಎಂಬ ಸೂಚನೆ ಲಭ್ಯವಾಗಿದೆ.

ಕಳೆದ ದಿವಸ 13,000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನ ವೈರಸ್ ದೃಢಪಟ್ಟಿದ್ದು ದೇಶದಲ್ಲಿ ಕೊರೋನ ರೋಗಿಗಳ ಸಂಖ್ಯೆ ಪ್ರತಿ ದಿನವೂ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ. ಆದುದರಿಂದ ಇದನ್ನು ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಸಹಿತ ಇತರ ಕ್ರಮಗಳಿಗೆ ಸರಕಾರ ಮುಂದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಶಿವಸೇನೆಯ ಮುಖವಾಣಿ ಸಾಮ್ನಾ ಇದಕ್ಕೆ ಸಂಬಂಧಿಸಿದ ಸೂಚನೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಕೊರೋನ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜನರು ಸ್ವಯಂ ನಿಯಂತ್ರಣ ಪಾಲಿಸಬೇಕು. ಲಾಕ್‍ಡೌನ್ ಮತ್ತು ಕೆಲವು ನಿಯಂತ್ರಣ ಹೇರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮ್ನಾ ಸಂಪಾದಕೀಯ ಬರೆದಿದೆ.

ಈ ಹಿಂದೆ ಜನರನ್ನುದ್ದೇಶಿಸಿ ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸರಕಾರದೊಂದಿಗೆ ಸಹಕರಿಸದಿದ್ದರೆ ಕಠಿಣ ನಿಯಂತ್ರಣಗಳನ್ನು ಜಾರಿಗೊಳಿಸಬೇಕಾಗಬಹುದು ಎಂದು ಹೇಳಿದ್ದರು.