ದ.ಕನ್ನಡ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ತಾಲೂಕು ಕೇಂದ್ರಗಳಿಗೆ ಭೇಟಿ: ಜನವರಿ 28 ರಿಂದ 3೦ರ ವರೆಗೆ ಜನಸಂಪರ್ಕ ಸಭೆ

0
336

ಸನ್ಮಾರ್ಗ ವಾರ್ತೆ

ಮಂಗಳೂರು: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ಕೆ.ಸಿ.ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ. ಮತ್ತು ಗುರುರಾಜ್‌ರವರು ದ.ಕ. ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಜನವರಿ 28, 29 ಮತ್ತು 30 ರಂದು ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಜನವರಿ 28 ರಂದು ಬೆಳಿಗ್ಗೆ 11 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಜನವರಿ 29 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರ ಹಾಗೂ ಜನವರಿ 30 ರಂದು ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿ ನೀಡಿ ನಂತರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.