ಪ್ರಧಾನಿಯ ದ್ವೇಷ ಭಾಷಣ ತಡೆಯಲು ಚುನಾವಣಾ ಆಯೋಗಕ್ಕೆ ಮನವಿ

0
117

ಸನ್ಮಾರ್ಗ ವಾರ್ತೆ

ಪ್ರಧಾನಿ ನರೇಂದ್ರ ಮೋದಿಯವರ ದ್ವೇಷದ ಭಾಷಣ ಮತ್ತು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮತ್ತಷ್ಟು ಸುಳ್ಳು ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ತಮಿಳುನಾಡು ಕಾಂಗ್ರೆಸ್ ಸಮಿತಿ ಮದ್ರಾಸ್ ಹೈಕೋರ್ಟ್‌ಗೆ ಮನವಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯು ಹಿಂದೂ ರಾಷ್ಟ್ರೀಯತೆಯ ಒಡೆದು ಆಳುವ ಪ್ರಚಾರದಲ್ಲಿ ತೊಡಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಸೆಲ್ವಪೆರುಂತಗೈ ಮೂಲಕ ಸಲ್ಲಿಸಲಾದ ಮನವಿಯಲ್ಲಿ ದೂರಲಾಗಿದೆ. ಮೋದಿಯವರ ಇತ್ತೀಚಿನ ಭಾಷಣಗಳನ್ನು ಉಲ್ಲೇಖಿಸಿ, ಪ್ರಧಾನಿಯವರ ಭಾಷಣವು ಕಟ್ಟುಕಥೆಗಳಿಂದ ತುಂಬಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳುವ ನಿಂದನಾತ್ಮಕ ಭಾಷೆ ಬಳಸಿದ್ದಾರೆ.
ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಭಾಷಣವು ಅಗೌರವ ಮಾತ್ರವಲ್ಲ, ನಾಚಿಕೆಗೇಡಿನದ್ದಾಗಿದೆ, ಅವರು ಕೋಮು ಉದ್ವಿಗ್ನತೆಯನ್ನು ಉತ್ತೇಜಿಸುತ್ತಾರೆ ಮತ್ತು ಜನರ ನಡುವೆ ವಿಭಜನೆಯನ್ನು ಬಿತ್ತುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here