ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

0
181

ಸನ್ಮಾರ್ಗ ವಾರ್ತೆ

ಮಂಗಳೂರು:- ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿ ಪಡೆಯಲು 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, ಮತ್ತು 3ಎ ಗೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಮೀರಿರಬಾರದು. ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷದೊಳಗಿನ ಗರಿಷ್ಠ ವಯೋಮಿತಿ ಇರಬೇಕು.ತರಬೇತಿ ಅವಧಿಯಲ್ಲಿ ಹಾಜರಾತಿಗನುಸಾರವಾಗಿ ಮಾಹೆಯಾನ ರೂ.4,000 ತರಬೇತಿ ಭತ್ಯೆ ಪಾವತಿಸಲಾಗುವುದು.

ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಯವರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ-ಕಾಪಿಕಾಡ್, ಮಂಗಳೂರು, ದ.ಕ ಜಿಲ್ಲೆ ಇಲ್ಲಿಂದ ಪಡೆದು ಅರ್ಜಿಯೊಂದಿಗೆ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ, ಪದವಿ/ಕಾನೂನು ಪದವಿಯ ಅಂಕ ಪಟ್ಟಿಗಳು, ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿತರಾಗಿರುವ ಬಗ್ಗೆ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರ (ಪಾಸ್‌ಪೋರ್ಟ್ ಸೈಜ್) ಲಗತ್ತಿಸಬೇಕು ಹಾಗೂ ಭರ್ತಿ ಮಾಡಿದ ಅರ್ಜಿ ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.