ದಿಕ್ಕು ದೆಸೆ ಇಲ್ಲದ ಬಜೆಟ್: ವೆಲ್ಫೇರ್ ಪಾರ್ಟಿ ಆಕ್ರೋಶ

0
416

ಸನ್ಮಾರ್ಗ ವಾರ್ತೆ

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿರುವ 2021 ನೇ ಸಾಲಿನ ಬಜೆಟ್ ಹಿಂದಿನ ವರುಷದ ಕಾಪಿ ಆಗಿದೆ ಇದರಲ್ಲಿ ಯಾವುದೇ ಹೊಸ ಯೋಜನೆಗಳು ಇಲ್ಲ, ಕೋವಿಡ್‌ನಿಂದ ತ್ತರಿಸಿ ಹೋಗಿರುವ ಜನರಿಗೆ ಭರವಸೆ ಮೂಡಿಸುವ ಯಾವುದೇ ಪ್ರಯತ್ನ ಇದರಲಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಯಾವುದೇ ಪ್ಯಾಕೇಜ್ ಇಲ್ಲ. ಕಳೆದ ವರ್ಷ ಮತ್ತು ಈ ವರುಷ ನೆರೆಯಿಂದಾಗಿ ಬಹಳಷ್ಟು ಜನ ಸೂರು, ಗದ್ದೆ ಕಳೆದುಕೊಂಡಿದ್ದು ಇನ್ನು ಅರ್ಧದಷ್ಟು ಜನರಿಗೆ ಪರಿಹಾರ ಸಿಕ್ಕಿಲ್ಲ. ಈ ಬಜೆಟ್‌ನಲ್ಲೂ ಯಾವುದೇ ಪ್ರಸ್ತಾವನೆ ಇಲ್ಲ. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡುವ ಬಗ್ಗೆಯು ಯಾವುದೇ ಯೋಜನೆ ಘೋಷಣೆ ಆಗಿಲ್ಲ. ಕೊರೋನದಿಂದ ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಸಂಕಷ್ಟದಲ್ಲಿ ಇದೆ ಆದರೆ ಸರಕಾರ ಈ ಬಜೆಟ್ ನಲ್ಲಿ ಅದರ ಬಗ್ಗೆ ಯಾವುದೇ ಪ್ರಸ್ತಾವನೆ ಮಾಡಿಲ್ಲ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಇಂದ ಸಾರ್ವಜನಿಕರ ಬದುಕು ಕಷ್ಟದಲ್ಲಿದೆ, ಸರಕಾರ ಈ ಬಜೆಟ್‌ನಲ್ಲಿ ತೆರಿಗೆ ಕಡಿತ ಗೊಳಿಸಿ ಜನರಿಗೆ ಸಹಾಯ ಮಾಡಬೇಕ್ಕಿತು. ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೇವಲ 29,688 ಕೋಟಿ ರೂಪಾಯಿ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಈ ವರ್ಷದ ಬಜೆಟ್‌ನಲ್ಲಿ 70 ಕೋಟಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಅವರು ಕಳವಳ ವ್ಯಕ್ತಪಡಿಸಿದರು.