ಆಕ್ಸಿಜನ್ ಕೊರತೆಯಿಂದ 24 ಜನರ ಸಾವು: ಆರೋಗ್ಯ ಸಚಿವ ಸುಧಾಕರ್ ಕೂಡಲೇ ರಾಜೀನಾಮೆ ನೀಡಿ- ವೆಲ್ಫೇರ್ ಪಾರ್ಟಿ ಆಗ್ರಹ

0
267

ಸನ್ಮಾರ್ಗ ವಾರ್ತೆ

ಬೆಂಗಳೂರು: ಚಾಮರಾಜನಗರದಲ್ಲಿ ಆಮ್ಲಜನಕದ ಕೊರತೆಯಿಂದಾಗಿ 24 ಜನರು ಸಾವನ್ನಪ್ಪಿರುವುದು ಆಘಾತಕಾರಿ. ಇದು ಸರ್ಕಾರದ ಮತ್ತು ಜಿಲ್ಲಾಡಳಿತದ ಸಂಪೂರ್ಣ ವೈಫಲ್ಯ ಮತ್ತು ಶಿಕ್ಷಾರ್ಹ ಅಪರಾಧ. ಉನ್ನತ ಮಟ್ಟದ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು.

ಅಧಿಕಾರಿಗಳ ಸಭೆಗಳಲ್ಲಿ ಮಾಧ್ಯಮಗಳ ಮೂಲಕ ಸರ್ಕಾರದ ಪ್ರತಿನಿಧಿಗಳು ಆಮ್ಲಜನಕದ ಕೊರತೆಯಿಲ್ಲ ಎಂದು ಹೇಳುತ್ತಾರೆ ಆದರೆ ವಾಸ್ತವ ಸ್ಥಿತಿಯೇ ಬೇರೆಯಾಗಿದೆ. ಸಮಸ್ಯೆಯನ್ನು ಒಪ್ಪಿಕೊಳ್ಳದೆ ಸತ್ಯ ಮುಚ್ಚಿಡುವ ಸಚಿವರು ಹಾಗು ಅಧಿಕಾರಿಗಳೇ ಈ ಸಾವುಗಳಿಗೆ ನೇರ ಹೊಣೆ ಹೊತ್ತು ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗಿದೆ. ಈ ಸ್ಥಿತಿಗೆ ಕಾರಣವಾದವರಿಗೆ ಶಿಕ್ಷೆ ಆಗಲೇಬೇಕು. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು, ಮತ್ತು ಮುಂದೆ ಈ ರೀತಿಯ ದುರ್ಘಟನೆಗಳು ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಒತ್ತಾಯಿಸಿದೆ.

LEAVE A REPLY

Please enter your comment!
Please enter your name here