ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ರಹೀಂ ಉಚ್ಚಿಲ ಆಯ್ಕೆ

0
851

ಸನ್ಮಾರ್ಗ ವಾರ್ತೆ

ಕರ್ನಾಟಕ ಸರ್ಕಾರ ಸಚಿವಾಲಯವು ವಿವಿಧ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ರಹೀಂ ಉಚ್ಚಿಲ ಆಯ್ಕೆಯಾಗಿದ್ದಾರೆ. ಇದಲ್ಲದೇ ಸದಸ್ಯರಾಗಿ ಶ್ರೀ ರೂಪೇಶ್ ಕುಮಾರ್, ಶ್ರೀ ಮುರುಳಿ ರಾಜ್, ಡಾ. ಮುನೀರ್ ಬಾವ, ಶ್ರೀಮತಿ ಸುರೇಖ, ಶ್ರೀಮತಿ ಚಂಚಲಾಕ್ಷಿ, ಫಸಲ್ ಹಸ್ಸಿಗೋಳಿ, ಸಿರಾಜ್ ಮುಡಿಪು ಆಯ್ಕೆಯಾಗಿದ್ದಾರೆ.

ಇದಲ್ಲದೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಟಿಮೆಸ್. ನಾಗಾಭರಣ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಜರ್ಕಳ ಗಿರೀಶ್ ಭಟ್, ಕನ್ನಡ ಪಿಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಎಮ್.ಎನ್. ನಂದೀಶ್ ಹಂಜೆ, ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ಬಿ.ವಿ. ವಸಂತಕುಮಾರ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಶ್ರೀ ಭೀಮಸೇನ, ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆನೂರು ಅನಂತಕೃಷ್ಟ ಶರ್ಮ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾಗಿ ವೀರಣ್ಣ ಅರ್ಕಸಾಲಿ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಡಿ. ಮಹೇಂದ್ರ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಪ್ರೊ. ಎಮ್.ಎ. ಹೆಗ್ಡೆ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಶ್ರೀಮತಿ ಮಂಜಮ್ಮ ಜೋಗತಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ದಯಾನಂದ ಕತ್ತಲಸರ, ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ಪಾರ್ವತಿ ಅಪ್ಪಯ್ಯ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಡಾ. ಜಗದೀಶ್ ಪೈ, ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ, ಬಯಲಾಟ ಅಕಾಡೆಮಿ(ಬಾಗಲಕೋಟೆ) ಅಧ್ಯಕ್ಷರಾಗಿ ಸೊರಬಕ್ಕನವರ್ ಹಾವೇರಿ ಆಯ್ಕೆಯಾಗಿದ್ದಾರೆ.