ಹಿರಿಯ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ನಿಧನ

0
1050

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ ಸೆ.11: ಹಿರಿಯ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್(80) ಅವರು ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.