ಸನ್ಮಾರ್ಗ ವಾರ್ತೆ
ಮಂಗಳೂರು: 2023ರ ಅವಧಿಗೆ ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮುಹಮ್ಮದ್ ಆಸಿಫ್ ಡಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಸಿಫ್‌ರವರು ಕಲ್ಲಡ್ಕದ ಬೋಳಂತೂರು ಪಟ್ಟಣದ ನಿವಾಸಿ. ವಾದಿಹುದಾ ಸಂಸ್ಥೆಯಿಂದ ಬಿ.ಕಾಮ್ ಪದವಿ ಹಾಗೂ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ ಬಿ.ಎ ಪದವಿಯನ್ನು ಪಡೆದುಕೊಂಡಿದ್ದು, ಪ್ರಸ್ತುತ ಸಮಾಜ ವಿಜ್ಞಾನದಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿದ್ದಾರೆ. ಆಸಿಫ್ ಕಣ್ಣೂರು ಜಿಲ್ಲೆಯ ಜುಮ್ಮಾ ಮಸೀದಿಯಲ್ಲಿ ಖತೀಬರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬೆಂಗ್ರೆಯ ಎ.ಆರ್.ಕೆ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇವೇಳೆ 2023ನೇ ಸಾಲಿನ ದ.ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹಯ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ಮುಸ್ತಫಾ ಬೆಂಗ್ರೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಹಿಲ್ ಸಿ.ಹೆಚ್ ಆಯ್ಕೆಯಾಗಿದ್ದಾರೆ.












