ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ

0
277

ಸನ್ಮಾರ್ಗ ವಾರ್ತೆ

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡು ಬಂದಿದೆ.

ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.