ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ: ಮಾವೋವಾದಿಗಳ ಕೃತ್ಯ ಎಂದು ಶಂಕಿಸಿದ ಪೊಲೀಸರು

0
145

ಸನ್ಮಾರ್ಗ ವಾರ್ತೆ

ಛತ್ತೀಸ್ಗಢ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಬಸ್ತಾನ್ ಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾವೋವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾರಾಯಣಪುರ ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಗಂಡೇಟಿಗೆ ಬಲಿಯಾಗಿದ ವ್ಯಕ್ತಿ. ಬಸ್ತಾರ್ ಪ್ರದೇಶದಲ್ಲಿ ಕಳೆದ ಒಂದು ವಾರದಲ್ಲಿ ಹತ್ಯೆಯಾದ ಎರಡನೇ ಬಿಜೆಪಿ ನಾಯಕರಿವರು.

ಸಾಹು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಾರಾಯಣಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹತ್ಯೆಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲವಾದರೂ, ಹತ್ಯೆಯ ಹಿಂದೆ ಮಾವೋವಾದಿಗಳ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸಮಗ್ರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ.