ಬಿಜೆಪಿ ಸಂಸದ ಅಭಯ್ ಭಾರದ್ವಾಜ್ ನಿಧನ

0
596

ಸನ್ಮಾರ್ಗ ವಾರ್ತೆ

ನವದೆಹಲಿ: ಗುಜರಾತ್ ಮೂಲದ ಬಿಜೆಪಿಯ ರಾಜ್ಯಸಭಾ ಸಂಸದ ಅಭಯ್ ಭಾರದ್ವಾಜ್ ಮಂಗಳವಾರ ನಿಧನರಾದರು. ಅವರು ಒಂದು ತಿಂಗಳ ಹಿಂದೆಯೇ ಕರೋನಾ ಸೋಂಕಿಗೆ ಒಳಗಾಗಿದ್ದರು. ನಂತರ ಅವರನ್ನು ವಡೋದರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಹದಗೆಟ್ಟಾಗ ಅವರನ್ನು ನಂತರ ಚೆನ್ನೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ವೈದ್ಯರ ಪ್ರಕಾರ, ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದ್ದಾರೆಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ಮುಖ್ಯಮಂತ್ರಿ ಸೇರಿದಂತೆ ಹಲವಾರು ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 4 ತಿಂಗಳ ಹಿಂದೆ ಭಾರದ್ವಾಜ್ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.