ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಕೇಂದ್ರ ಬಿಂದುಗಳು: ರಾಹುಲ್‌ ಗಾಂಧಿ

0
189

ಸನ್ಮಾರ್ಗ ವಾರ್ತೆ

ನೀಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗ್ರೇಸ್‌ ಅಂಕ ಪಡೆದಿದ್ದ 1,500 ಅಭ್ಯರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲು ನಿರ್ಧರಿಸಲಾಗಿದೆ. ಅವ್ಯವಹಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರ ಬಿಂದುಗಳಾಗಿವೆ” ಎಂದು ಆರೋಪಿಸಿದ್ದಾರೆ.

ನೀಟ್ ಅವ್ಯವಹಾರದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ದೇಶದ ಯುವಜನರ ಪರವಾಗಿ ರಸ್ತೆಯಿಂದ ಸಂಸತ್‌ವರೆಗೆ ಧ್ವನಿ ಎತ್ತಲು ನಮ್ಮ ಪಕ್ಷ ಬದ್ದವಾಗಿದೆ. ನೀಟ್‌ನಲ್ಲಿ ಅವ್ಯಹಾರದ ಆರೋಪದ ಮೇಲೆ ಬಿಹಾರ, ಗುಜರಾತ್ ಹಾಗೂ ಹರಿಯಾಣ ರಾಜ್ಯಗಳಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ಎಲ್ಲ ರಾಜ್ಯಗಳು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಾಗಿವೆ” ಎಂದು ಹೇಳಿದ್ದಾರೆ.

ನೀಟ್‌ ಅವ್ಯವಹಾರದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿದ್ದು, ಮೋದಿ ಮೌನದ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘‘ನೀಟ್ ಬರೆದಿದ್ದ 24 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಲಾಗಿದೆ. ಆದರೂ ಯಾಥಾಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಶರಣಾಗಿದ್ದಾರೆ’’ ಎಂದು ಕಿಡಿಕಾರಿದ್ದಾರೆ.

https://x.com/RahulGandhi/status/1802976369355485403?t=bWY3uvktVucDq8iRcnSnZA&s=19