ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಸ್ಥಗಿತವಾಗುತ್ತವೆ ಎಂಬುದು ಬಿಜೆಪಿಯ ಅಪ್ಪಟ ಸುಳ್ಳು ಪ್ರಚಾರ; ಮುಖ್ಯಮಂತ್ರಿ ಸಿದ್ದರಾಮಯ್ಯ

0
145

ಸನ್ಮಾರ್ಗ ವಾರ್ತೆ

ಗ್ಯಾರೆಂಟಿ ಯೋಜನೆಗಳಿಗಾಗಿ 52,009 ಕೋಟಿ ರೂಪಾಯಿಯನ್ನು ನಾವು ಮೀಸಲಿಟ್ಟಿದ್ದೇವೆ. ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳು ಸ್ಥಗಿತವಾಗುತ್ತವೆ ಎಂಬುದು ಬಿಜೆಪಿಯ ಅಪ್ಪಟ ಸುಳ್ಳು ಪ್ರಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತಾಡಿದ ಅವರು ಗ್ಯಾರಂಟಿಗಳಿಗೆ ಇದಕ್ಕಿಂತ ಹೆಚ್ಚು ಹಣ ಕೊಡ್ತೀವಿ. ಸರ್ಕಾರ ಬಂದು ಇಂದಿಗೆ ಒಂದು ವರ್ಷ ತುಂಬಿದ್ದು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಇರುವ ಕಾರಣ ಸಂಭ್ರಮ ಆಚರಣೆ ಮಾಡಲು ಸಾಧ್ಯ ಆಗಿಲ್ಲ. ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ. ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಜಾರಿ ಮಾಡಿದ್ದೇವೆ ಎಂದವರು ಹೇಳಿದ್ದಾರೆ.