ಸನ್ಮಾರ್ಗ ವಾರ್ತೆ
ಹೊಸದಿಲ್ಲಿ, ಫೆ. 1: ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ 99,300 ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ.
ಕೌಶಲ್ಯ ಅಭಿವೃದ್ಧಿಗಾಗಿ 3000 ಕೋಟಿ ರೂ. ಮೀಸಲಾಗಿಡಲಾಗಿದೆ. ರಾಷ್ಟ್ರೀ ಪೊಲೀಸ್ ವಿಶ್ವವಿದ್ಯಾನಿಲಯ ಆರಂಭಿಸಲಾಗುವುದು. ಹೆಚ್ಚು ಉದ್ಯಾಗಾಧಾರಿತ ಕೋರ್ಸು ಗಳನ್ನು ಆರಂಭಿಸಲಾಗುವುದು ಮತ್ತು ಶಿಕ್ಷಣ ಕ್ಷೇತ್ರಕ್ಕೆ ವಿದೇಶಿ ಹೂಡಿಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದು ನಿರ್ಮಲಾ ಸೀತಾರಾಮ್ ತಿಳಿಸಿದರು. ನ್ಯಾಶನಲ್ ಇನ್ಸ್ಟಿಟ್ಯೂಷನ್ ರ್ಯಾಂಕಿಂಗ್ ಪ್ರೇಂ ವರ್ಕಿಗಾಗಿ ಉನ್ನತ 100 ಸಂಸ್ಥೆಗಳು ನೀಡುವ ಪದವಿಮಟ್ಟದ ಸಂಪೂರ್ಣ ಆನ್ಲೈನ್ ವಿದ್ಯಾಭ್ಯಾಸ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ. ಹೊಸ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ಸಚಿವೆ ಹೇಳಿದ್ದಾರೆ.












