ಕೊರೋನಾ ಸೋಂಕನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ

0
176

ಸನ್ಮಾರ್ಗ ವಾರ್ತೆ

ದಾವೋಸ್: ಕೊರೋನಾ ಸೋಂಕನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಿಲ್ಲ. ಇಂತಹ ವೈರಸ್ ಗೆ ಕೊನೆಯೆಂಬುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಆದರೆ ಸೂಕ್ತ ಕ್ರಮಗಳನ್ನು ಮತ್ತು ಈಗಾಗಲೇ ವಿಧಿಸಿರುವ ನಿರ್ಬಂಧಗಳನ್ನು ಸರಿಯಾಗಿ ಪಾಲಿಸಿದರೆ ಈ ವರ್ಷದ ಕೊನೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿಯನ್ನು ಕೊನೆಗೊಳಿಸ ಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಆನ್ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಉನ್ನತಾಧಿಕಾರಿ ಮೈಕೆಲ್ ರಾನ್, ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ಹೆಚ್ಚಿಸುವುದು ಹಾಗೂ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ಮೂಲಕ ಕೊರೋನವನ್ನು ನಿಯಂತ್ರಿಸಬಹುದು ಎಂದಿದ್ದಾರೆ.