ಸಿಇಟಿ ಫಲಿತಾಂಶ ಜೂ.15, ನಾಳೆ ಪ್ರಕಟ

0
261

ಸನ್ಮಾರ್ಗ ವಾರ್ತೆ

ಬೆಂಗಳೂರು, ಜೂ.14: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023 ಸಿಇಟಿ ಯ ಫಲಿತಾಂಶವನ್ನು ನಾಳೆ ಜೂ.15, ಬೆಳಿಗ್ಗೆ 9.30ಕ್ಕೆ ಪ್ರಕಟಿಸುವುದಾಗಿ ಕೆಇಎ ತಿಳಿಸಿದೆ.

ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಅಧಿಕೃತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ http://kea.kar.nic.in ಗೆ ಬೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದೆಂದು ಕೆಇಎ ತಿಳಿಸಿದೆ.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ.

ಈ ವರ್ಷ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ರಿಂದ ಮೇ 22ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 16,000 ಕನ್ನಡೇತರ ವಿದ್ಯಾರ್ಥಿಗಳು ಈ ಪರೀಕ್ಷೆ ಹಾಜರಾಗಿದ್ದಾರೆ. ಮೇ 26 ರಂದು ಕೆಇಎ ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.