ಮುಖ್ಯಮಂತ್ರಿಗಳೇ ರೈತರ ಖಾತೆಗೆ ಹಣ ಜಮೆ ಯಾವಾಗ? ನಿರುಪಾದಿ ಕೆ ಗೋಮರ್ಸಿ ಒತ್ತಾಯ

0
220

ಸನ್ಮಾರ್ಗ ವಾರ್ತೆ

ರಾಜ್ಯ ಸರ್ಕಾರ ರಾಜ್ಯದಾದ್ಯಂತ 161 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿ ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರದಿಂದ ಆಗಲಿ, ರಾಜ್ಯ ಸರ್ಕಾರದಿಂದಾಗಲಿ ಯಾವುದೇ ರೀತಿಯ ರೈತರ ಖಾತೆಗೆ ಹಣ ಜಮೆ ಮಾಡಿಲ್ಲ ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿಗಳು ಮೌನ ಮುರಿದಿರುವುದು ಬಿಟ್ಟು ರೈತರಿಗೆ ಬರ ಪರಿಹಾರ ಶೀಘ್ರಗತಿಯಲ್ಲಿ ನೀಡುವಂತೆ ಪತ್ರಿಕೆ ಹೇಳಿಕೆ ಮೂಲಕ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಿರುಪಾದಿ ಕೆ ಗೋಮರ್ಸಿ ಒತ್ತಾಯಿಸಿದರು.

ಬೀಜ, ಗೊಬ್ಬರ ಉಳಿಮೆಗೆ ಮಾಡಿದ ಸಾಲ ತೀರಿಸಲಾಗದೇ ಅನ್ನದಾತರು ಪರಿತಪಿಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಅನುದಾನ ಕಡಿಮೆ ಪ್ರಮಾಣದಲ್ಲಿರುವುದರಿಂದ ರೈತರು ಮಾಡಿದ ಸಾಲದ ಬಡ್ಡಿ ಕಟ್ಟಲು ಸಾಕಾಗುವುದಿಲ್ಲ, ರಾಜ್ಯ ಮತ್ತು ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದ ಹಣ ಬಿಡುಗಡೆ ಮಾಡಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಮತ್ತು ರಾಜ್ಯದ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.