7 ದಿವಸಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ – ಕೇಂದ್ರ ಸಚಿವ

0
136

ಸನ್ಮಾರ್ಗ ವಾರ್ತೆ

ದಕ್ಷಿಣ ಪರಗಣ: ಏಳು ದಿನಗಳಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಬಿಜೆಪಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಕೇಂದ್ರ ಸಚಿವರು ಈ ಘೋಷಣೆ ಮಾಡಿದರು.

ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ನಿರಾಶ್ರಿತ ಸಹೋದರರನ್ನು ಆಗಾಗ್ಗೆ ದಾರಿ ತಪ್ಪಿಸುತ್ತಿದ್ದಾರೆ. ರಾಷ್ಟ್ರೀಯ ಪೌರತ್ವ ಕಾಯ್ದೆ ದೇಶದ ಕಾನೂನು ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎಲ್ಲರಿಗೂ ಪೌರತ್ವ ಸಿಗಲಿದೆ. ಇದು ಬಿಜೆಪಿಯ ಬದ್ಧತೆ ಎಂದೂ ಕೇಂದ್ರ ಸಚಿವರು ಹೇಳಿದ್ದಾರೆ.

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗುವುದು ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ವರ್ಷ ಹೇಳಿದ್ದರು. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೌರತ್ವ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕಾನೂನನ್ನು ಜಾರಿಗೆ ತರಲು ಬಿಜೆಪಿ ಬದ್ಧವಾಗಿದೆ ಎಂದು ಅಮಿತ್ ಶಾ ಹೇಳಿದ್ದರು.