ತನ್ನ ಉತ್ತರಾಧಿಕಾರಿಯಾಗಿ ಉದಯ್ ಯು ಲಲಿತ್ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ

0
256

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ ರಮಣ ಅವರು ತನ್ನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಎನ್‌ ರಮಣ ಅವರು ತಮ್ಮ ಶಿಫಾರಸು ಪತ್ರದ ಪ್ರತಿಯನ್ನು ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ವೈಯಕ್ತಿಕವಾಗಿ ಗುರುವಾರ ಬೆಳಿಗ್ಗೆ ಹಸ್ತಾಂತರಿಸಿದ್ದಾರೆಂದು ಸುಪ್ರೀಂಕೋರ್ಟ್‌ ಕಚೇರಿಯ ಅಧಿಕೃತ ಮೂಲಗಳು ತಿಳಿಸಿವೆ.

ಬುಧವಾರ ರಾತ್ರಿ ತಮ್ಮ ಮುಂದಿನ ಸಿಜೆಐ ಹೆಸರು ಶಿಫಾರಸು ಮಾಡುವಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು ಬುಧವಾರ ಸಂಜೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಲ್ಲಿ ವಿನಂತಿಸಿತ್ತು.

ಸಿಜೆಐ ರಮಣ ಅವರು ಆಗಸ್ಟ್ 26ರಂದು ನಿವೃತ್ತರಾಗಲಿದ್ದು, 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಲಲಿತ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಂತರ ನವೆಂಬರ್ 8ರವರೆಗೆ ಅಲ್ಪಾವಧಿಯ ಅಧಿಕಾರದಲ್ಲಿ ಇರುತ್ತಾರೆ.

ಉದಯ್ ಲಲಿತ್ ಅವರು ಪ್ರಸ್ತುತ ಸುಪ್ರೀಂಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ. 1983ರಂದು ವಕೀಲ ವೃತ್ತಿಗೆ ಸೇರಿಕೊಂಡಿದ್ದರು.