ಮುಖ್ಯಮಂತ್ರಿ ಬೊಮ್ಮಾಯಿಗೆ ಕೋವಿಡ್: ದೆಹಲಿ ಪ್ರವಾಸ ರದ್ದು

0
391

ಸನ್ಮಾರ್ಗ ವಾರ್ತೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಈ ಹಿನ್ನೆಲೆಯಲ್ಲಿ ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.

ಶನಿವಾರ ದೆಹಲಿಯಲ್ಲಿ ನಡೆಯಲಿದ್ದ 75ನೇ ಸ್ವಾತಂತ್ರೋತ್ಸದ ಅಮೃತ ಮಹೋತ್ಸವ ಕುರಿತ ಸಭೆಯಲ್ಲಿ ಮುಖ್ಯಮಂತ್ರಿಗಳು ಹಾಜರಾಗಬೇಕಿತ್ತು. ಆದರೆ ದಿಢೀರನೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.