ಸನ್ಮಾರ್ಗ ವಾರ್ತೆ
ಬೆಂಗಳೂರು, ಮೇ 27: ಸರ್ಕಾರ ಬದಲಾದ ಹಿನ್ನಲೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದ್ದು, ಇದೀಗ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆಯ ದೃಷ್ಟಿಯಿಂದ ಮರು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದರು.
ಇನ್ನು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ನೆಲೆಯಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.














