ಮಾರ್ನಮಿಕಟ್ಟೆ: ಕೊರಗಜ್ಜನ ಗುಡಿಯ ಎದುರು ಕಾಂಡೋಮ್ ಇಟ್ಟ ಕಿಡಿಗೇಡಿಗಳು; ಕಠಿಣ ಕ್ರಮಕ್ಕೆ ಸೂಚಿಸಿದ ಶಾಸಕ ವೇದವ್ಯಾಸ ಕಾಮತ್

0
245

ಸನ್ಮಾರ್ಗ ವಾರ್ತೆ

ಮಂಗಳೂರು: ನಗರದ ನಂದಿಗುಡ್ಡೆ ಸಮೀಪದ ಮಾರ್ನಮಿಕಟ್ಟೆ ಬಳಿಯಿರುವ ಕೊರಗಜ್ಜನ ಗುಡಿಯ ಎದುರು ಕಿಡಿಗೇಡಿಗಳು ಉಪಯೋಗಿಸಿದ ಕಾಂಡೋಮ್ ಇಟ್ಟು, ಅಪವಿತ್ರಗೊಳಿಸಿದ ಘಟನೆ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಲು ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. .

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಲು ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಈ ವಿಚಾರದ ಕುರಿತು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಶಾಂತಿಯುತವಾಗಿರುವ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಶಾಂತವಾಗಿರುವ ಕರಾವಳಿಯಲ್ಲಿ ಕೋಮುಗಲಭೆ ಎಬ್ಬಿಸಲು ಪ್ರಯತ್ನಿಸಿದರೆ ಅದನ್ನು ಕಂಡು ಸುಮ್ಮನೆ ಇರಲಾಗದು. ಕಳೆದ 4 ವರ್ಷಗಳಲ್ಲಿ ಕೋಮುಗಲಭೆಗಳು ನಡೆದಿಲ್ಲ ಮುಂದೆಯೂ ಕೂಡ ಅದಕ್ಕೆ ಆಸ್ಪದ ನೀಡುವುದಿಲ್ಲ ಎಂದು ಹೇಳಿದ್ದಾರೆ.