ಕಾಂಗ್ರೇಸ್ ನದ್ದು ರಿವರ್ಸ್ ಗೇರ್ ಸರ್ಕಾರ; ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

0
107

ಸನ್ಮಾರ್ಗ ವಾರ್ತೆ

ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ, ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ಅನ್ನೋದು ಗೊತ್ತಿದೆ. ಅವರ ಅಧಿಕಾರ ಇದೆ ಏನು ಮಾಡುತ್ತಾರೆ ನೊಡೋಣ. ಆದರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಮಾಡಿದರೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡುತ್ತೇವೆ. ಅಧಿಕಾರ ಬಂದಾಗ ಸ್ವೇಚ್ಚಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಅನ್ನೋದು ದುರಹಂಕಾರದ ಮಾತು ಎಂದರು.

ಕಾಂಗ್ರೆಸ್ ನವರು ಗ್ಯಾರಂಟಿಯಲ್ಲೂ ರೀವರ್ಸ್ ಹೋಗ್ತೀದಾರೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮ ಜನರಿಗೆ ಗೊತ್ತಾಗಿದೆ. ಇಷ್ಟು ಬೇಗ ಸರ್ಕಾರ ಸೇಡಿನ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.