ರಾಜ್ಯ ಶಿಕ್ಷಣ ನೀತಿ (SEP) ಕುರಿತು ನಾಳೆ ಮುಸ್ಲಿಂ ಮುಖಂಡರ ಸಮಾಲೋಚನಾ ಸಭೆ

0
263

ಸನ್ಮಾರ್ಗ ವಾರ್ತೆ

ಕರ್ನಾಟಕ ಸರ್ಕಾರ ರೂಪಿಸುತ್ತಿರುವ ರಾಜ್ಯ ಶಿಕ್ಷಣ ನೀತಿಗಳ ನಿರೂಪಣೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಗಳ ಮಕ್ಕಳು ಶಿಕ್ಷಣದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಕುರಿತು ಚರ್ಚಿಸಲು ಸಮುದಾಯದ ಪ್ರತಿನಿದಿಗಳೊಂದಿಗೆ ಸಮಾಲೋಚನಾ ಸಭೆಯು ನಾಳೆ, ಜುಲೈ 6ರಂದು ಆಯೋಜಿಸಲಾಗಿದೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಗಾಂಧಿನಗರ, ಫ್ರೀಡಂ ಪಾರ್ಕ್ ಹಿಂಭಾಗದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ.

ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದ, ಶೋಷಿತ, ಅವಕಾಶ ವಂಚಿತ, obc ವರ್ಗದೊಳಗಿನ, ಧಾರ್ಮಿಕ ಅಲ್ಪಸಂಖ್ಯಾತರಾದ, ವಿಶೇಷವಾಗಿ ಶೈಕ್ಷಣಿಕವಾಗಿ ಅತಿ ಹಿಂದುಳಿದ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸಮಸ್ಯೆ ಹಾಗೂ ಸವಾಲುಗಳನ್ನು ಚರ್ಚಿಸಲು ಮುಸ್ಲಿಂ ಪ್ರತಿನಿದಿಗಳ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.

ಕರ್ನಾಟಕ ಸರಕಾರದ SEP ನಿರೂಪಣೆ ಸಮಿತಿಯ ಮುಖಂಡರು ಉಪಸ್ಥಿತರಿರುವ ಈ ಸಭೆಯಲ್ಲಿ
ಕರ್ನಾಟಕ ರಾಜ್ಯದ ಮುಸ್ಲಿಂ ಸಮುದಾಯಗಳ ಪ್ರತಿನಿದಿಗಳು / ಮುಖಂಡರು ಈ ಸಭೆಯಲ್ಲಿ ಭಾಗವಹಿಸುವಂತೆ ಸಂಯೋಜಕರಾದ ಖಾಸಿಂ ಸಾಬ್, ಬೆಂಗಳೂರು, ಹಾಗೂ ಡಾ. ಆರ್. ವಿ. ಚಂದ್ರಶೇಖರ್ ಮನವಿ ಮಾಡಿದ್ದಾರೆ.