ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಅರಣ್ಯಾಧಿಕಾರಿಗೆ ದಂಡ

0
41

ಸನ್ಮಾರ್ಗ ವಾರ್ತೆ

ಮಂಗಳೂರು: ಜಿಲ್ಲೆಯಲ್ಲಿ ಮತ್ತೊಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದ ಮೇರೆಗೆ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋಟಿ ರೂಪಾಯಿ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.

ಕೊಂಚಾಡಿ-ದೇರೇಬೈಲ್‌ನಲ್ಲಿ ವಾಸವಾಗಿದ್ದ ಎಸ್. ರಾಘವ ಪಾಟಾಳಿಯು ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ದೂರಿನ ಮೇರೆಗೆ ವಲಯ ಅರಣ್ಯಾಧಿಕಾರಿಯ ವಿರುದ್ಧ 2011ರ ಜುಲೈ 21ರಂದು ಮಂಗಳೂರು ಲೋಕಾಯುಕ್ತ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ವಾದ-ಪ್ರತಿವಾದ ಆಲಿಸಿದ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಆರೋಪಿಗೆ 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋ.ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ.