ಕೊರೋನಾ: ಮುಂದಿನ ಒಂದು ವಾರ ನಿರ್ಣಾಯಕ

0
674

ಸನ್ಮಾರ್ಗ ವಾರ್ತೆ

ನವದೆಹಲಿ ಏಪ್ರಿಲ್ 17- ಲಾಕ್ಡೌನ್ ನಿಂದಾಗಿ ಸಾರ್ವಜನಿಕ ಅಸಹನೆಗಳು ಹೆಚ್ಚಾಗುತ್ತಿರುವುದರ ನಡುವೆಯೇ, ಮೇ ತಿಂಗಳಲ್ಲಿ ಕೋರೋನಾ ಸೋಂಕು ಪ್ರಕರಣಗಳಲ್ಲಿ ಹೆಚ್ಚಾಗುವ ವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ

ಸದ್ಯ ಆಂಧ್ರಪ್ರದೇಶ ಮತ್ತು ಮಧ್ಯ ಪ್ರದೇಶಗಳು ದೇಶದ ಮುಂದೆ ದೊಡ್ಡ ಸವಾಲಾಗಿ ನಿಂತಿವೆ. ಆಂಧ್ರ ಪ್ರದೇಶದಲ್ಲಿ 5834 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದರೆ ಇವರಲ್ಲಿ 525 ಪ್ರಕರಣಗಳು ದೃಢಪಟ್ಟಿದೆ. ಮಧ್ಯಪ್ರದೇಶದಲ್ಲಿ 9198 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದ್ದು 938 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಮುಂದಿನ ವಾರ ಭಾರತದ ಪಾಲಿಗೆ ನಿರ್ಣಾಯಕ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಮುಂದಿನ ವಾರದಿಂದ ಪರೀಕ್ಷೆಗಳು ಹೆಚ್ಚಾಗಲಿದ್ದು ಇದರಿಂದಾಗಿ ಸೋಂಕಿತರ ಪ್ರಕರಣಗಳು ಕೂಡ ಗಣನೀಯ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.