ಸನ್ಮಾರ್ಗ ವಾರ್ತೆ
ನವದೆಹಲಿ: 2 ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಲಸಿಕೆ ನೀಡಲು ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಅನುಮತಿ ಲಭಿಸಿದೆ. ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಗ್ರೀನ್ಸಿಗ್ನಲ್ ಸಿಕ್ಕಿದ್ದು, ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ತುರ್ತು ಬಳಕೆಗೆ ಒಪ್ಪಿಗೆ ಲಭಿಸಿದೆ.
ನವೆಂಬರ್ ತಿಂಗಳಿನಲ್ಲಿ ಕೊರೋನ ಮೂರನೆ ಅಲೆಯ ಸಂಭಾವ್ಯಗಳಿದ್ದು ಲಸಿಕೆಗೆ ಅನುಮೋದನೆ ಲಭಿಸಿರುವುದು ಮಕ್ಕಳಲ್ಲಿನ ಕೊರೋನ ಹರಡುವಿಕೆ ಭೀತಿಯನ್ನು ತಗ್ಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು.
ಐಸಿಎಂಆರ್ ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್-19 ಲಸಿಕೆ ಆಗಿದೆ.












