ಮಾಜಿ ಸಿಎಂ ಸಿದ್ದರಾಮಯ್ಯ ರವರಿಗೆ ಕೊರೋನ: ಒಂದೇ ದಿನದಲ್ಲಿ 50,488 ಜನರಿಗೆ ಸೋಂಕು; ದೇಶದಲ್ಲಿ ಒಟ್ಟು 18.55 ಲಕ್ಷ ಕೋವಿಡ್ ಪ್ರಕರಣಗಳು

0
474

ಸನ್ಮಾರ್ಗ ವಾರ್ತೆ

ನವದೆಹಲಿ,ಆ.4: ದೇಶದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆಯು 18,55,331 ಕ್ಕೆ ಏರಿದೆ. ಸೋಮವಾರ, ಒಂದೇ ದಿನದಲ್ಲಿ 50,488 ಹೊಸ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 8,968 ಹಾಗೂ ಆಂಧ್ರಪ್ರದೇಶದಲ್ಲಿ 7822 ಕೊರೋನ ಪ್ರಕರಣಗಳು ವರದಿಯಾಗಿವೆ.

ಮತ್ತೊಂದೆಡೆ, ಕಳೆದ ಎರಡು ದಿನಗಳಿಂದ ಅಮೆರಿಕ ಮತ್ತು ಬ್ರೆಜಿಲ್ ದೇಶಗಳಿಗಿಂತ ಭಾರತದಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದಿವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯರವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದ್ದು ಸ್ವತಃ ಅವರೇ ಈ ಕುರಿತು ಟ್ವೀಟ್ ಮಾಡಿದ್ದಾರೆ, ತನ್ನ ಕೊರೋನಾ ವರದಿ ಸಕಾರಾತ್ಮಕವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆಯ ಮೇರೆಗೆ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ತಮ್ಮ ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಗಾಗಬೇಕೆಂದು ಅವರು ಹೇಳಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.