ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಾಂಗ್ರೆಸ್ನ ಸೇವಾದಳ ಕಚೇರಿಯಲ್ಲಿ ಬೆಂಕಿ ಹಿಡಿಯಿತು. ಕೂಡಲೇ ದಿಲ್ಲಿಯ ಅಗ್ನಿಶಾಮಕ ದಳಗಳು ಧಾವಿಸಿದ್ದು, ಒಂದು ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿವೆ.
ರಾತ್ರೆ ಏಳು ಗಂಟೆಗೆ ಕಾಂಗ್ರೆಸ್ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಮಾಹಿತಿ ಲಭಿಸಿದ್ದು ಕೂಡಲೇ ಅಗ್ನಿಶಾಮಕ ದಳ ಧಾವಿಸಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದರು. ಎಸಿಯ ಶಾರ್ಟ್ ಸಕ್ರ್ಯೂಟ್ ಬೆಂಕಿ ಹಿಡಿಯಲು ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ತನಿಖೆಯನ್ನು ನಡೆಸಲಾಗುವುದೆಂದು ಅಧಕಾರಿಗಳು ತಿಳಿಸಿದರು. ಬೆಂಕಿ ಅವಘಡದ ವೇಳೆ ಕಚೇರಿಯಲ್ಲಿ ಯಾರೂ ಇರಲಿಲ್ಲ ಎಂಬುದಾಗಿ ವರದಿಯಾಗಿದೆ.












