ಸನ್ಮಾರ್ಗ ವಾರ್ತೆ
ಹೊಸದಿಲ್ಲಿ,ಜೂ.16: ಕೊರೋನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಿಲ್ಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರ ಜ್ವರ, ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು ಅವರನ್ನು ರಾಜೀವ್ ಗಾಂಧಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಸಚಿವರನ್ನು ಇಂದು ಕೊರೋನ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ರವಿವಾರ ಕೇಂದ್ರ ಮಂತ್ರಿ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಕೆಜ್ರಿವಾಲ್ ಭಾಗವಹಿಸಿದ್ದ ಸಭೆಯಲ್ಲಿ ಜೈನ್ ಕೂಡ ಇದ್ದರು.
ಕೊರೋನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ವಿವರ ಸಚಿವರೇ ಟ್ವೀಟ್ ಮಾಡಿದ್ದಾರೆ. ತೀವ್ರ ಜ್ವರ ಉಸಿರಾಟದ ತೊಂದರೆ ಇದೆ. ಆದ್ದರಿಂದ ಕಳೆದ ದಿವಸ ರಾತ್ರೆ ಆರ್ಜಿಎಸ್ಎಚ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದರು. ನೀವು ಸ್ವಯಂ ನಿಮ್ಮನ್ನು ಗಮನಿಸದೆ 24 ಗಂಟೆ ಜನರಿಗಾಗಿ ಕೆಲಸ ಮಾಡುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆ ಕೂಡ ಗಮನ ಇಡಬೇಕು. ಬೇಗನೆ ಗುಣಮುಖರಾಗಿರಿ ಎಂದು ಆರೋಗ್ಯ ಸಚಿವರ ಟ್ವೀಟ್ ಶೇರ್ ಮಾಡಿ ಅರವಿಂದ್ ಕೇಜ್ರಿವಾಲ್ ಕಮೆಂಟು ಮಾಡಿದ್ದಾರೆ.
ಓದುಗರೇ, ಸನ್ಮಾರ್ಗ ಫೇಸ್ಬುಕ್ ಪೇಜ್ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.












