ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ಡೆಂಗ್ಯೂ ಜ್ವರದ ಹಾವಳಿ

0
259

ಸನ್ಮಾರ್ಗ ವಾರ್ತೆ

ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ಡೆಂಗ್ಯೂ ಜ್ವರ ಹಾವಳಿಯಿಟ್ಟಿದ್ದು, 800ಕ್ಕೂ ಹೆಚ್ಚು ಮಂದಿ ಇದಕ್ಕೆ ಜ್ವರಕ್ಕೆ ತುತ್ತಾಗಿದ್ದಾರೆ. ರಾಜ್ಯ ಸರಕಾರದ ವರಿಯಂತೆ 859 ಮಂದಿಗೆ ಡೆಂಗ್ಯೂ ಜ್ವರ ಬಂದಿದೆ.

ಗಾಝಿಯಾಬಾದ್‍ನಲ್ಲಿ 26 ಹೊಸ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಒಂದು ತಿಂಗಳಲ್ಲಿ ಒಟ್ಟು ರೋಗಿಗಳ ಸಂಖ್ಯೆ 547 ಆಗಿದೆ. ಈಗ 108 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 56 ಮಂದಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಕ್ಕಳಿಗೂ ಹರಡುವ ಸಾಧ್ಯತೆ ಇದ್ದು ಮುನ್ನೆಚ್ಚರ ವಹಿಸಬೇಕೆಂದು ಗಾಝಿಯಾಬಾದ್ ಮುಖ್ಯ ವೈದ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.