ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಿದ್ದನ್ನ ನೀನು ನೋಡಿದ್ದೀಯಾ?: ಪತ್ರಕರ್ತನಿಗೆ ಮರು ಪ್ರಶ್ನೆ ಹಾಕಿದ ಸಿದ್ದರಾಮಯ್ಯ

0
1463

ಸನ್ಮಾರ್ಗ ವಾರ್ತೆ

ಮಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಿದ ವ್ಯಕ್ತಿಯ ಹತ್ಯೆಯಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಉತ್ತರಿಸಿದ್ದಾರೆ ನೀನು ಅಲ್ಲಿ ಇದ್ದಿಯೇನಪ್ಪ, ಪ್ರತ್ಯಕ್ಷ ಸಾಕ್ಷಿಯಾ ನೀನು ಎಂದು ಪತ್ರಕರ್ತರನ್ನು ಅವರು ಮರು ಪ್ರಶ್ನಿಸಿದ್ದಾರೆ. ಜೊತೆಗೆ ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು ಎಂದು ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆಯ ಪ್ರಕರಣದಲ್ಲಿ 15 ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೂ ಅದು ತಪ್ಪು ಎಂದು ಸ್ಪಷ್ಟಪಡಿಸಿದ್ರು.