ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹ ಅಪರಾಧ- ಡಾ. ಕೆ.ಸುಧಾಕರ್

0
322

ಸನ್ಮಾರ್ಗ ವಾರ್ತೆ

ಬೆಂಗಳೂರು: ಗರ್ಭಿಣಿಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ #ಮಹಿಳಾಮಾಸ, #ಯಾವುದುಸರಿಎಂದುತಿಳಿದುಕೊಳ್ಳಿ# ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ ಅವರು, ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ. ಗರ್ಭಿಣಿ ಮಹಿಳೆಯನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹವಾಗಿದ್ದು, ದಂಡದೊಂದಿಗೆ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.