ಸನ್ಮಾರ್ಗ ವಾರ್ತೆ
ಮದ್ಯಪಾನ ಮಾಡಿ ತರಗತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಾಂಶುಪಾಲರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಹಾರಾಷ್ಟ್ರದ ಸಂಬಾಜಿ ನಗರದಲ್ಲಿರುವ ಜಿಲ್ಲಾ ಪರಿಷತ್ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ವಿನೋದ್ ಕಾಟ್ ಕೆ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಶಾಲೆಯನ್ನು ಸುಧಾರಿಸಿ ಎಂಬ ಕಾಕ್ರೋಚ್ ಪಕ್ಷದ ರಾಷ್ಟ್ರ ವ್ಯಾಪಿ ಅಭಿಯಾನದ ಭಾಗವಾಗಿ ನಡೆಸಿದ ತಪಾಸಣೆಯ ಸಮಯದಲ್ಲಿ ಶಿಕ್ಷಕರ ಈ ಮದ್ಯ ಪಾನ ಬೆಳಕಿಗೆ ಬಂದಿದೆ. ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಮ್ಮ ಎಕ್ಸ್ ಖಾತೆಯ ಮೂಲಕ ಮದ್ಯದ ಪ್ರಭಾವದಲ್ಲಿ ತರಗತಿಯ ನೆಲದ ಮೇಲೆ ಪ್ರಜ್ಞಾಹೀನವಾಗಿ ಬಿದ್ದಿರುವ ಮುಖ್ಯೋಪಾಧ್ಯಾಯರ ದೃಶ್ಯಗಳನ್ನು ಬಿಡುಗಡೆ ಮಾಡಿದ್ದರು. ಈ ವಿಡಿಯೋ ಭಾರಿ ವಿವಾದವಾದ ನಂತರ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ತಕ್ಷಣವೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿತು.
ಸ್ಥಳೀಯರು ಮತ್ತು ಪೋಷಕರು ಮುಖ್ಯೋಪಾಧ್ಯಾಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರು ಆಗಾಗ ಶಾಲೆಗೆ ಕುಡಿದು ಬರುತ್ತಾರೆ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಧ್ಯಾಹ್ನ ಊಟದ ನಂತರ 3 ಗಂಟೆಯವರೆಗೆ ಅವರು ತರಗತಿಗೆ ಹಾಜರಾಗುವುದಿಲ್ಲ ಎಂದು ಸ್ಥಳೀಯರು ಸಾಕ್ಷಿ ನುಡಿದಿದ್ದಾರೆ.
ದೇಶದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಗುರಿಯೊಂದಿಗೆ ಕಾಕ್ರೋಚ್ ಜನತಾ ಪಾರ್ಟಿಯು ಆಗಸ್ಟ್ 15 ರಂದು ಈ ಅಭಿಯಾನವನ್ನು ಪ್ರಾರಂಭಿಸಿತು. ಅಭಿಯಾನದ ಭಾಗವಾಗಿ ಶಾಲೆಗೆ ಭೇಟಿ ನೀಡಿದ ಕಾರ್ಯಕರ್ತರು ಈ ಶಿಕ್ಷಕನನ್ನು ಕ್ಯಾಮೆರಾದಲ್ಲಿ ಸೆರೆಹಿಡಿದರು.












