ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಆಶಿಯಾ ಮಿಸ್ಬಾಗೆ ದ್ವಿತೀಯ ಸ್ಥಾನ

0
456

ಸನ್ಮಾರ್ಗ ವಾರ್ತೆ

ಕಲ್ಲಡ್ಕ: ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಶಿಯಾ ಮಿಸ್ಬಾ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ಸ್ಪರ್ಧೆ ರಾಜ್ಯದ ವಿವಿಧ ಕಾಲೇಜುಗಳಿಂದ ಆಯ್ಕೆಯಾದ ವಿದ್ಯಾರ್ಥಿಗಳ ನಡುವೆ ನಡೆದಿದ್ದು, ಮತದಾರರ ಜಾಗೃತಿ, ಪ್ರಜಾಪ್ರಭುತ್ವದ ಮಹತ್ವವನ್ನು ಕುರಿತು ಪ್ರಬಂಧ ಬರೆಯಲು ಅವಕಾಶ ನೀಡಲಾಗಿತ್ತು. ಆಶಿಯಾ ಮಿಸ್ಬಾ ತನ್ನ ಸಮರ್ಥ ಅಭಿವ್ಯಕ್ತಿಯ ಮೂಲಕ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಆಶಿಯಾ ಮಿಸ್ಬಾಗೆ ಅಭಿನಂದನೆ ಸಲ್ಲಿಸಿದ್ದಾರೆ.