ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ಶಾಸಕ ಕಾಮತ್

0
377

ಸನ್ಮಾರ್ಗ ವಾರ್ತೆ

ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಸ್ಪಷ್ಟವಾಗಿ ವಿರೋಧಿಸುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಲವಂತದಿಂದ ಮತಾಂತರ ಮಾಡುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆಗೊಳಪಡಿಸುವ ಕಾಯಿದೆಯನ್ನು ರದ್ದುಪಡಿಸುವ ಮೂಲಕ ರಾಜ್ಯದಲ್ಲಿ ಮತಾಂತರಿಗಳ ಅಟ್ಟಹಾಸಕ್ಕೆ ರತ್ನ ಕಂಬಳಿ ಹಾಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಿರಂತರವಾಗಿ ಹಿಂದೂ ಸಮಾಜವನ್ನು ಒಡೆಯುವ ಕೃತ್ಯವನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್ಸು ಪಡೆಯುವ ತನ್ನ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಇಡೀ ಹಿಂದೂ ಸಮಾಜ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.